ವಿಷಯಕ್ಕೆ ಹೋಗು

ವಾರಿ ಬಲಿದು ವಾರಿಕಲ್ಲಾದಂತೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ವಾರಿ ಬಲಿದು ವಾರಿಕಲ್ಲಾದಂತೆ ಶೂನ್ಯವೆ ಸ್ವಯಂಭುವಾಯಿತ್ತು. ಆ ಸ್ವಯಂಭುಲಿಂಗದಿಂದಾಯಿತ್ತು ಮೂರ್ತಿವತ್ತು
ಆ ಮೂರ್ತಿಯಿಂದಾಯಿತ್ತು ವಿಶ್ವೋತ್ಪತ್ತಿ
ಆ ವಿಶ್ವೋತ್ಪತ್ತಿಯಿಂದಾಯಿತ್ತು ಸಂಸಾರ
ಆ ಸಂಸಾರದಿಂದಾಯಿತ್ತು ಮರವೆ. ಆ ಮರವೆಯೆಂಬ ಮಹಾಮಾಯೆ ವಿಶ್ವವ ಮುಸುಕಿದಲ್ಲಿ ನಾ ಬಲ್ಲೆ
ಬಲ್ಲಿದರೆಂಬ ಅರುಹಿರಿಯರೆಲ್ಲಾ ತಾಮಸಕ್ಕೊಳಗಾಗಿ ಮೀನಕೇತನನ ಬಲೆಗೆ ಸಿಲುಕಿ ಮಾಯೆಯ ಬಾಯ ತುತ್ತಾದರಲ್ಲಾ ! ಗುಹೇಶ್ವರಾ.