ವಿಪ್ರರ ಕರೆದು `ನೃಪರುಗಳು ಇಪ್ಪರೆ ತಮ್ಮ ಶಿಶುವಿನೊಡನೆ'ಂದು ಬೆಸಗೊಂಡಡೆ
`ಇಪ್ಪರು
ಇಪ್ಪರು
ತಾವು ಬಿತ್ತಿದ ಫಲಂಗಳ ತಾವು ಉಣ್ಣದವರುಂಟೆ ಎಂದು ಕಣ್ಣ ಕಾಣದೆ ಹೇಳಿದರು
ಅಣ್ಣಗಳು
ಕರ್ಮದ ಬಟ್ಟೆಯನು. ಅಂತೆಂದ ಮಾತ ಶಿಶು ಕೇಳಿ
ಕೆಟ್ಟೋಡಿ ಬಂದು
ಲಿಂಗದ ಹೊಟ್ಟೆಯ ಹೊಗಲು
ಅಟ್ಟಿಬಂದು ಖಂಡೆಯವ ಕಳೆದುಕೊಂಡು ಮಂಡೆಯನೊಡೆಯಲು
ಮಂಡೆ ಒಡೆದು ಭೂಮಂಡಲವರಿಯೆ ನಾಲ್ಕು ಪುರವಾಗಲು
ಘಟಸರ್ಪನ ತುಡುಕಿ ನಾಗನಾಥನಾಗಿ
ಇಪ್ಪತ್ತೇಳು ಬಸದಿಯನೊಡೆಯನೆ ಆಗಳಂತೆ ಎನ್ನ ಮಾಡಿದ ಕರ್ಮ ನಿಮ್ಮ ಕೈಯಲು ಕೆಡಿಸುವರು. ಮುನ್ನೊಬ್ಬ ಕೆಡಿಸಿಹನೆಂದು ಬಂದು ತುತ್ತನಿಟ್ಟು ಮರಳಿ ಕೈಯಿಡ ಹೋದಡೆ ತುತ್ತು ಹುಳುಗುಪ್ಪೆಯಾಗದೆ ಶಿವಧರ್ಮವ ಕೆಡಿಸಿದವನು ಅಧರ್ಮಕ್ಕಿಳಿವನು. ಕೂಡಲಸಂಗಮದೇವ ಸಾಕ್ಷಿಯಾಗಿ ಮಕರಭೋಜನವಾಗನೆ ವಿನಾಶಕ್ತಿರಾಯನು.