Library-logo-blue-outline.png
View-refresh.svg
Transclusion_Status_Detection_Tool

ವಿಶ್ವಾಸದಿಂದ ಭಕ್ತನಾಗಿ, ಆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ವಿಶ್ವಾಸದಿಂದ ಭಕ್ತನಾಗಿ
ಆ ವಿಶ್ವಾಸದೊಳಗಣ ನೈಷ್ಠೆಯಿಂದ ಮಹೇಶ್ವರನಾಗಿ
ಆ ನೈಷ್ಠೆಯೊಳಗಣ ಸಾವಧಾನದಿಂದ ಪ್ರಸಾದಿಯಾಗಿ
ಆ ಸಾವಧಾನದೊಳಗಣ ಸ್ವಾನುಭಾವದಿಂದ ಪ್ರಾಣಲಿಂಗಿಯಾಗಿ
ಆ ಸ್ವಾನುಭಾವದೊಳಗಣ ಅರಿವಿನಿಂದ ಶರಣನಾಗಿ
ಆ ಅರಿವು ನಿಜದಲ್ಲಿ ಸಮರಸಭಾವವನೈದಿ ನಿರ್ಭಾವಪದದೊಳು ನಿಂದ ಭೇದವೇ ಐಕ್ಯಸ್ಥಲ ಕಾಣಾ ಗುಹೇಶ್ವರಾ.