ವಿಷಯವೆಂಬ ! ಕಾಳಗಿಚ್ಚಿನ
ಗೋಚರ
ಲೇಖಕರು: ಷಣ್ಮುಖಸ್ವಾಮಿ
ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ವಿಷಯವೆಂಬ ಕಾಳಗಿಚ್ಚಿನ ಜ್ವಾಲೆಯಲ್ಲಿ ಈರೇಳುಲೋಕವೆಲ್ಲ ಹತವಾಗುತಿರ್ಪುದು ನೋಡಾ ! ಅದೆಂತೆಂದೊಡೆ : ಕುಂಡಲಿಯೆಂಬ ಮಾಯಾಸರ್ಪನು ತನ್ನ ಬಾಲವ ಬ್ರಹ್ಮರಂಧ್ರಕ್ಕೇರಿಸಿ
ನಾಭಿಚಕ್ರವ ಸುತ್ತಿಕೊಂಡು
ಅಧೋಮುಖವಾಗಿ ಇಂದ್ರಿಯವಿಷವ ಕಾರುತಿಪ್ಪುದು ನೋಡಾ ! ಆ ವಿಷದ ನಂಜು ತಲೆಗೇರಿದಲ್ಲಿ ಅಸಿಯಜವ್ವನೆಯರ ಸಂಗಸುಖ ಬಹುಸವಿಯೆಂದು ತಲೆದೂಗುತ್ತಿಪ್ಪುದು ನೋಡಾ ಸಕಲ ಪ್ರಾಣಿಗಳು. ಇದು ಪಶುಪತಿಯುಮಾಡಿದ ಮಾಯದ ವಿಧಿಯೆಂದು ತಿಳಿಯದೆ ಹಸಗೆಟ್ಟುಹೋಯಿತ್ತು ನೋಡಾ ಮೂಜಗವೆಲ್ಲ ಅಖಂಡೇಶ್ವರಾ.