Library-logo-blue-outline.png
View-refresh.svg
Transclusion_Status_Detection_Tool

ವಿಷ್ಣು ಕರ್ಮಿ ರುದ್ರ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ವಿಷ್ಣು ಕರ್ಮಿ ರುದ್ರ ನಿಷ್ಕರ್ಮಿ:ಕ್ರಮವನರಿಯದೆ ನುಡಿವಿರೊ ! ವೇದಶ್ರುತಿಗಳ ತಿಳಿಯಲರಿಯದೆ ವಾದುಮಾಡುವರೆಲ್ಲ ಕೇಳಿ: ವಿಷ್ಣು ನಾನಾಯೋನಿಯಲ್ಲಿ ಬಾರದ ಭವಂಗಳಲ್ಲಿ ಬರುತಿಪ್ಪ
ರುದ್ರನಾವ ಯೋನಿಯಲ್ಲಿ ಬಂದನೆಂದು ನೀವು ಹೇಳಿರೊ ! ಓಂ ವಿಷ್ಣೋಃ ಕರ್ಮಾಣಿ ಪಶ್ಯತ ಯತೋ ವ್ರತಾನಿ ಪಸ್ಪಶೇ ಇಂದ್ರಸ್ಯ ಯುಜ್ಯಃ ಸಖಾ ತದ್ ವಿಷ್ಣೋಃ ಪರಮಂ ಪದಂ ಸದಾ ಪಶ್ಯಂತಿ ಸೂರಯಃ ದಿವೀವ ಚಕ್ಷುರಾತತಂ ತದ್ ವಿಪ್ರಾಸೋ ವಿಪನ್ಯವೋ ಜಾಗೃವಾಂ ಸಃ ಸಮಿಂಧತೇ ! ವಿಷ್ಣೋರ್ಯತ್ಪರಮಂ ಪದಂ ಎಂಬ ಶ್ರುತಿವಚನವ ತಿಳಿಯಿಂ ಭೋ ! ವರ್ಮವನೆತ್ತಿ ನುಡಿದಲ್ಲದೆ ನಿಲ್ಲಿರಿ; ನಿಮ್ಮ ಕರ್ಮವು ಅತ್ಯತಿಷ*ದ್ದಶಾಂಗುಲದಿಂದತ್ತತ್ತಲೆ
ಕೂಡಲಸಂಗಮದೇವಾ.