ವೀರದನುಜರೆಲ್ಲಾ ಧಾರುಣಿಯೆಂಬುದರೊಳಗೆ ಸಾಗರವಾಗಿದ್ದುದನಾರೂ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವೀರದನುಜರೆಲ್ಲಾ ಧಾರುಣಿಯೆಂಬುದರೊಳಗೆ ಸಾಗರವಾಗಿದ್ದುದನಾರೂ ಅರಿಯರಲ್ಲಾ
ದ್ವಾರಾವತಿಯಪುರದೊಳಗೆ ಪರವು ಬಂದಿದ್ದಡೆ ಶರೀರಸಂಬಂಧವ ಮಾಡಲರಿಯರಲ್ಲಾ. ಕರಗಸವ ಕಳೆದುಕೊಂಡು
ಪರಶುರಾಮನ ಗೆಲಿದು
ಸುರರೊಳಗೆ ಸುಳಿದಾಡಲರಿಯರಲ್ಲಾ. ವಾರುಧಿಯ ಸೇರಿಕೊಂಡು
ಮರಣವೆಂಬುದ ನಿಲಿಸಿ
ತ್ರಿಪುರವ ಮೂರ್ತಿಗೊಳಿಸಲರಿಯರಲ್ಲಾ. ಮೇರುವೆಂಬುದ ಹೊಕ್ಕು ನೂರೆಂಟನೆಣಿಸಿಕೊಂಡು ನಿರಾಕಾರದಲಡಗುವರಿನ್ನಾರು ಹೇಳಾ ಸಾಸಿರದ ಮೇಲೆ ನೂರೆಂಬತ್ತೆಂಟು ರಾಶಿ ಪರುಷವೇಧಿಗಳಾಗಲರಿಯರಲ್ಲಾ. ಕೂಡಲಸಂಗನ ಶರಣರ ಸಂಬಂಧವು ಪ್ರಭುವಿಂಗಲ್ಲದೆ ಮತ್ತಾರಿಗೆಯೂ ಅಳವಡದು.