ವೇದಕ್ಕೆ ಒರೆಯ ಕಟ್ಟುವೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವೇದಕ್ಕೆ ಒರೆಯ ಕಟ್ಟುವೆ
ಶಾಸ್ತ್ರಕ್ಕೆ ನಿಗಳವನಿಕ್ಕುವೆ
ತರ್ಕದ ಬೆನ್ನ ಬಾರನೆತ್ತುವ
ಆಗಮದ ಮೂಗ ಕೊಯಿವೆ
ನೋಡಯ್ಯಾ. ಮಹಾದಾನಿ ಕೂಡಲಸಂಗಮದೇವಾ
ಮಾದಾರ ಚೆನ್ನಯ್ಯನ ಮನೆಯ ಮಗ ನಾನಯ್ಯಾ.