Library-logo-blue-outline.png
View-refresh.svg
Transclusion_Status_Detection_Tool

ವೇದಾಂತ ಸಿದ್ಧಾಂತವಪ್ಪ ತರ್ಕಮರ್ಕಟ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ವೇದಾಂತ ಸಿದ್ಧಾಂತವಪ್ಪ ತರ್ಕಮರ್ಕಟ ವಿದ್ಥಿಯ ದರ್ಶನವಾದಿಗಳ ಪರಿ ವರ್ತನೆಯಲ್ಲ; ಶರಣನ ವರ್ತನೆ ಬೇರೆ. ವೀರಶೈವ ಸಿದ್ಧಾಂತ ನಿರ್ಣಯ ನಿಜಭಕ್ತಿ. ನಿಜ ಶಿವಜ್ಞಾನ
ಪರಮ ವೈರಾಗ್ಯವನುಳ್ಳ ಸರ್ವಾಚಾರ ಸಂಪನ್ನ ಶರಣ. ಲಿಂಗಾತ್ಮಕ
ಲಿಂಗೇಂದ್ರಿಯ
ಲಿಂಗಾಂಗಸಂಗಿ
ಘನಲಿಂಗಯೋಗಿ. ಪ್ರಾಣಮುಕ್ತ
ಮನೋಮುಕ್ತ
ಶರೀರಮುಕ್ತ. ಅನಾದಿ ಕೇವಲ ಮುಕ್ತರಯ್ಯಾ ನಿಮ್ಮ ಶರಣರು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.