ವೇದ ಇತಿಹಾಸಂಗಳ ಶಾಸ್ತ್ರ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವೇದ ಶಾಸ್ತ್ರ ಆಗಮ ಪುರಾಣ ತರ್ಕ ವ್ಯಾಕರಣ ಇತಿಹಾಸಂಗಳ ಓದಿ ಕೇಳಿ ಹೇಳುವಾತ ಜಾಣನೆ ? ಅಲ್ಲಲ್ಲ. ಜಾತಿಗೊಂದು ಮಾತು ಕಲಿತು ಸರ್ವರಿಗೆ ನೀತಿ ಹೇಳುವಾತ ಜಾಣನೇ ? ಅಲ್ಲಲ್ಲ. ಮತ್ತಾರು ಜಾಣರೆಂದಡೆ : ಮತ್ತಮತಿಯೆಂಬ ಕತ್ತಲೆಯ ಕಳೆದು
ತಥ್ಯಮಿಥ್ಯ ರಾಗದ್ವೇಷವನಳಿದು ನಿತ್ಯ ಲಿಂಗದಲ್ಲಿ ಚಿತ್ತವಡಗಿರ್ಪ ಚಿನ್ಮಯಶರಣನೇ ಜಾಣನಯ್ಯಾ ಅಖಂಡೇಶ್ವರಾ.