Library-logo-blue-outline.png
View-refresh.svg
Transclusion_Status_Detection_Tool

ವೇದ ನಡನಡುಗಿತ್ತು, ಶಾಸ್ತ್ರವಗಲಿ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ವೇದ ನಡನಡುಗಿತ್ತು
ಶಾಸ್ತ್ರವಗಲಿ ಕೆಲಕ್ಕೆ ಸಾರಿದ್ದಿತಯ್ಯಾ ! ತರ್ಕ ತರ್ಕಿಸಲರಿಯದೆ ಮೂಗುವಟ್ಟಿದ್ದಿತಯ್ಯಾ ! ಆಗಮ ಹೆರತೊಲಗಿ ಅಗಲಿದ್ದಿತಯ್ಯಾ ! ನಮ್ಮ ಕೂಡಲಸಂಗಯ್ಯನು ಮಾದಾರ ಚೆನ್ನಯ್ಯನ ಮನೆಯಲುಂಡ ಕಾರಣ.