ವೇದ ವೇದಾಂತಗಳಿಗೆ ಅಸಾಧ್ಯವಾದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವೇದ ವೇದಾಂತಗಳಿಗೆ ಅಸಾಧ್ಯವಾದ ಅನುಪಮಲಿಂಗವ ತಂದುಕೊಟ್ಟನಯ್ಯಾ
ಸದ್ಗುರು ಎನ್ನ ಕರಸ್ಥಲಕ್ಕೆ. ನಾದಬಿಂದು ಕಳೆಗೆ ಅಭೇದ್ಯವಾದ ಅಚಲಿತ ಲಿಂಗವ ತಂದುಕೊಟ್ಟನಯ್ಯಾ
ಸದ್ಗುರು ಎನ್ನ ಕರಸ್ಥಲಕ್ಕೆ. ವಾಙ್ಮನಕ್ಕಗೋಚರವಾದ ಅಖಂಡಿತ ಲಿಂಗವ ತಂದುಕೊಟ್ಟನಯ್ಯಾ
ಸದ್ಗುರು ಎನ್ನ ಕರಸ್ಥಲಕ್ಕೆ
ಇನ್ನು ನಾನು ಬದುಕಿದೆನು
ನಾ ಬಯಸುವ ಬಯಕೆ ಕೈಸಾರಿತ್ತಿಂದು ಕೂಡಲಸಂಗಮದೇವಾ.