ವಿಷಯಕ್ಕೆ ಹೋಗು

ವೇಧಾದೀಕ್ಷೆ ಮಂತ್ರದೀಕ್ಷೆ ಕ್ರಿಯಾದೀಕ್ಷೆಯೆಂಬ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ವೇಧಾದೀಕ್ಷೆ ಮಂತ್ರದೀಕ್ಷೆ ಕ್ರಿಯಾದೀಕ್ಷೆಯೆಂಬ ದೀಕ್ಷಾತ್ರಯಂಗಳಿಂದ ತನುತ್ರಯಂಗಳ ಪೂರ್ವಾಶ್ರಯವ ಕಳದು ಲಿಂಗತ್ರಯಂಗಳ ಸಂಬಂಧಿಸಿದನದೆಂತೆಂದಡೆ: ವೇಧಾದೀಕ್ಷೆಯೆಂದು ಶ್ರೀಗುರು ತನ್ನ ಹಸ್ತವ ಶಿಷ್ಯನ ಮಸ್ತಕದಲ್ಲಿ ಸಂಯೋಗವ ಮಾಡಿದುದು; ಮಂತ್ರದೀಕ್ಷೆಯೆಂದು ಶ್ರೀಗುರು ಪ್ರಣವಪಂಚಾಕ್ಷರಿಯ ಮಂತ್ರವ ಕರ್ಣದಲ್ಲಿ ಉಪದೇಶಿಸಿದುದು; ಕ್ರಿಯಾದೀಕ್ಷೆಯೆಂದು ಆ ಮಂತ್ರಸ್ವರೂಪವನೆ ಇಷ್ಟಲಿಂಗಸ್ವರೂಪವ ಮಾಡಿ ಕರಸ್ಥಲದಲ್ಲಿ ಸಂಬಂಧಿಸಿದುದು. ಇದು ಕಾರಣ
ವೇಧಾದೀಕ್ಷೆಯಿಂದ ಕಾರಣತನುವಿನ ಪೂರ್ವಾಶ್ರಯವಳಿದು ಭಾವಲಿಂಗಸಂಬಂಧವಾಯಿತ್ತು. ಮಂತ್ರದೀಕ್ಷೆಯಿಂದ ಸೂಕ್ಷ ್ಮತನುವಿನ ಪೂರ್ವಾಶ್ರಯವಳಿದು ಪ್ರಾಣಲಿಂಗಸಂಬಂಧವಾಯಿತ್ತು. ಕ್ರಿಯಾದೀಕ್ಷೆಯಿಂದ ಸ್ಥೂಲತನುವಿನ ಪೂರ್ವಾಶ್ರಯವಳಿದು ಇಷ್ಟಲಿಂಗಸಂಬಂಧವಾಯಿತ್ತು. ಅಂಗತ್ರಯಂಗಳಲ್ಲಿ ಲಿಂಗತ್ರಯಂಗಳ ಧರಿಸಿದೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.