Library-logo-blue-outline.png
View-refresh.svg
Transclusion_Status_Detection_Tool

ವ್ರತಗೇಡಿ ವ್ರತಗೇಡಿ ಎಂಬರು,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ವ್ರತಗೇಡಿ ವ್ರತಗೇಡಿ ಎಂಬರು
ವ್ರತ ಕೆಡಲು ಅದೇನು ಹಾಲಂಬಿಲವೆ ? ವ್ರತ ಕರಿದೊ ? ಬಿಳಿದೊ ? ಕಟ್ಟಿದಾತ ಭಕ್ತನಪ್ಪನೆ ? ಕೆಡಹಿದಾತ ವೈರಿಯಪ್ಪನೆ ? ಕಟ್ಟುವುದಕ್ಕೆ ಲಿಂಗವು ಒಳಗಾಗಬಲ್ಲುದೆ ? ಕೆಡಹುವುದಕ್ಕೆ ಲಿಂಗವು ಬೀಳಬಲ್ಲುದೆ ? ಲಿಂಗವು ಬಿದ್ದಡೆ ಭೂಮಿ ಆನಬಲ್ಲುದೆ ? ಲೋಕಾದಿ ಲೋಕಂಗಳುಳಿಯಬಲ್ಲವೆ ? ಪ್ರಾಣಲಿಂಗ ಬಿದ್ದಿತ್ತೆಂಬ ದೂಷಕರ ನುಡಿಯ ಕೇಳಲಾಗದು ಗುಹೇಶ್ವರಾ.