ಶಬ್ದಸಂಭಾಷಣೆಯ ನುಡಿಯ ವರ್ತಿಸಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶಬ್ದಸಂಭಾಷಣೆಯ ನುಡಿಯ ವರ್ತಿಸಿ ನುಡಿವೆ
ತೊಡಹದ ಕೆಲಸದ ಬಣ್ಣದಂತೆ ಕಡಿಹಕ್ಕೆ ಒರೆಗೆ ಬಾರದು
ನೋಡಾ. ಎನ್ನ ಮನದಲೊಂದು
ಹೃದಯದಲೊಂದು
ವಚನದಲೊಂದು ನೋಡಾ. ಕೂಡಲಸಂಗಮದೇವಾ
ಆನು ಭಕ್ತನೆಂಬ ಹುಸಿಯ ಮಸಕವನೇನ ಬಣ್ಣಿಸುವೆನಯ್ಯಾ 290