ಶಬ್ದಿಯಾದಾತ ತರುಗಳ ಹೋತ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಬ್ದಿಯಾದಾತ ತರುಗಳ ಹೋತ
ನಿಶ್ಶಬ್ದಿಯಾದಾತ ಪಾಷಾಣವ ಹೋತ. ಕೋಪಿಯಾದಾತ ಅಗ್ನಿಯ ಹೋತ
ಶಾಂತನಾದಾತ ಜಲವ ಹೋತ. ಬಲ್ಲೆನೆಂಬಾತ ಇಲ್ಲವೆಯ ಹೋತ
ಅರಿಯೆನೆಂಬಾತ ಪಶುವ ಹೋತ. ಇದು ಕಾರಣ_ಅರಿಯೆನೆನ್ನದೆ ಬಲ್ಲೆನೆನ್ನದೆ ಅರುಹಿನ ಕುರುಹನಳಿದುಳಿದು ಗುಹೇಶ್ವರನೆಂಬ ಲಿಂಗವ ಹೋತವರನಾರನೂ ಕಾಣೆ.