ಶರಣಂಗೆ ಉತ್ಪತ್ಯವಿಲ್ಲಾಗಿ ಸ್ಥಿತಿಯಿಲ್ಲ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶರಣಂಗೆ ಉತ್ಪತ್ಯವಿಲ್ಲಾಗಿ ಸ್ಥಿತಿಯಿಲ್ಲ
ಸ್ಥಿತಿಯಿಲ್ಲವಾಗಿ ಲಯವಿಲ್ಲ
ಲಯವಿಲ್ಲವಾಗಿ ದೇಹನಾಮ ಪ್ರವರ್ತನೆಯಿಲ್ಲ
ಇವಾವುದೂ ಇಲ್ಲದ ಕಾರಣ
ಗುಹೇಶ್ವರಯ್ಯಾ
ನಿಮ್ಮ ಶರಣ ಬಚ್ಚಬರಿಯ ಬೆಳಗು.