ಶರಣನ ಒಡಲುಗೊಂಡ ಅಖಂಡಿತಲಿಂಗಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶರಣನ ಒಡಲುಗೊಂಡ ಅಖಂಡಿತಲಿಂಗಕ್ಕೆ ಅರ್ಚನೆಯಿಲ್ಲ
ಶರಣನ ಒಡಲುಗೊಂಡ ಅಚಲಿತಲಿಂಗಕ್ಕೆ ಅರ್ಪಿತವಿಲ್ಲ
ಶರಣನ ಒಡಲುಗೊಂಡ ಅನುಪಮಲಿಂಗಕ್ಕೆ ಅವಧಾನವಿಲ್ಲ. ಅದೇನು ಕಾರಣವೆಂದಡೆ: ಶರಣನಿಂದಾದ ಆರ್ಚನೆ
ಶರಣನಿಂದಾದ ಅರ್ಪಿತ
ಶರಣನಿಂದಾದ ಅವಧಾನ. ಇದು ಕಾರಣ ಸಂದಳಿದು ಲಿಂಗವಾದ ಮತ್ತೆ ಆನಂದವಲ್ಲದೆ ಅಣುಮಾತ್ರ ಕ್ರೀಯಿಲ್ಲ ಕಾಣಾ ಗುಹೇಶ್ವರಾ.