ಶರಣ, ನಿಚ್ಚನಿಚ್ಚ ಪೂಜಿಸುವಂಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶರಣ
ನಿಚ್ಚನಿಚ್ಚ ಪೂಜಿಸುವಂಗೆ ಇದಕ್ಕಿದೆ ದೃಷ್ಟದೀವಿಗೆ- ಪಾದೋದಕ; ಕೋಶಪಾನವಲ್ಲದೆ ಏನೂ ಇಲ್ಲವಯ್ಯಾ. ಮಜ್ಜನಕ್ಕೆರೆವುದು ಲಿಂಗ; ಕರಸ್ಥಲದಿಬ್ಯ. ಗುರುವಚನ; ಭಾಷಾಪತ್ರ ಶಿವಕರದಲ್ಲಿ. ಸತ್ಯದಿಂದ ನಡೆವಂಗೆ ನಿತ್ಯನೇಮವಾಗಿ ಸಲಿಸುವನಲ್ಲದೆ ಹುಸಿವಂಗೆ ಮಡಿಲ ಕಿಚ್ಚಾಗಿ ಸುಡುವ. ಲಿಂಗವ ಪೂಜಿಸಿ ಮರಳಿ ಅನ್ಯಾಯಕ್ಕೆರಗಿದಡೆ ಕೂಡಲಸಂಗಮದೇವನವರ ಹಲ್ಲ ಕಳೆವ.