ಶರಣ, ಲಿಂಗಾರ್ಚನೆಯ ಮಾಡಲೆಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶರಣ
ಲಿಂಗಾರ್ಚನೆಯ ಮಾಡಲೆಂದು ಪುಷ್ಪಕ್ಕೆ ಕರವ ನೀಡಿದಡೆ
ಆ ಪುಷ್ಪ ನೋಡ ನೋಡ ಕರದೊಳಡಗಿತ್ತಲ್ಲಾ ! ಅದು ಓಗರದ ಗೊಬ್ಬರವ ನುಣ್ಣದು; ಕಾಮದ ಕಣ್ಣರಿಯದು
ನಿದ್ರೆಯ ಕಪ್ಪೊತ್ತದು. ಅದು ಅರುಣ ಚಂದ್ರ[ರ] ತೆರೆಯಲ್ಲಿ ಬೆಳೆಯದು. ಲಿಂಗವೇದಿಯಾಗಿ ಬೆಳೆದ ಪುಷ್ಪವನು ಗುಹೇಶ್ವರಾ ನಿಮ್ಮ ಶರಣನು ಪ್ರಾಣಲಿಂಗಕ್ಕೆ ಪೂಜೆಯ ಮಾಡಿದನು.