ಶಶಿಮುಖಿಯರ ಸಂಗಕ್ಕೆ ಎಣಿಸುವ

ವಿಕಿಸೋರ್ಸ್ದಿಂದ



Pages   (key to Page Status)   


ಶಶಿಮುಖಿಯರ ಸಂಗಕ್ಕೆ ಎಣಿಸುವ ಪಶುಪ್ರಾಣಿಗಳು ಪಶುಪತಿಯ ಸಂಗಸುಖಕ್ಕೆ ಯಾಕೆ ಎಣಿಸಲೊಲ್ಲರಯ್ಯ? ಶಿವ ಶಿವಾ! ನೀ ಮಾಡಿದ ವಿಷಯದ ವಿದ್ಥಿ
ಈರೇಳುಲೋಕವನಂಡಲೆವುತ್ತಿದೆ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.