ಶಾಂಭವಲೋಕದ ಕುಂಬ್ಥಿನಿಯುದರದ ಮೇಲೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಾಂಭವಲೋಕದ ಕುಂಬ್ಥಿನಿಯುದರದ ಮೇಲೆ ಅಂಗನೆ ಅರುದಿಂಗಳ ಹಡೆದಳು ನೋಡಾ. ಅರುದಿಂಗಳ ಅದಾರನೂ ಅರಿಯದೆ ನಿರ್ವಯಲನೆ ಅರಿವುತ್ತರಿವುತ್ತ ಬೆರಗಾಗಲು ಕುಂಬ್ಥಿನಿಯುದರದಂಗನೆ ಸತ್ತುದ ಕಂಡು ಇಹಲೋಕ ಪರಲೋಕ ಆವ ಲೋಕವ ಹೊಗದೆ ಲೋಕಶ್ರೇಷ್ಠವಲ್ಲವೆಂದು ದೇಹವಿಲ್ಲದ ದೇವನ ಉದರವ ಬಗೆದು ಹೊಕ್ಕು ಅಗಣಿತನಪ್ರಮಾಣನಾದ ಲಿಂಗೈಕ್ಯಂಗೆ ನಮೋ ನಮೋಯೆಂದು ಬದುಕಿದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.