ಶಾಸ್ತ್ರಘನವೆಂಬೆನೆ ಕರ್ಮವ ಭಜಿಸುತ್ತಿದೆ.

ವಿಕಿಸೋರ್ಸ್ದಿಂದ


Pages   (key to Page Status)   

ಶಾಸ್ತ್ರಘನವೆಂಬೆನೆ ಕರ್ಮವ ಭಜಿಸುತ್ತಿದೆ. ವೇದ ಘನವೆಂಬೆನೆ ಪ್ರಾಣವಧೆಯ ಹೇಳುತ್ತಿದೆ. ಶ್ರುತಿ ಘನವೆಂಬೆನೆ ಮುಂದಿಟ್ಟು ಅರಸುತ್ತಿದೆ. ಅಲ್ಲೆಲ್ಲಿಯೂ ನೀವಿಲ್ಲದ ಕಾರಣ
ತ್ರಿವಿಧದಾಸೋಹದಲಲ್ಲದೆ ಕಾಣಬಾರದು ಕೂಡಲಸಂಗಮದೇವನ. 208