ಶಿವಂಗೆ ತಪ್ಪಿದ ಕಾಲ

ವಿಕಿಸೋರ್ಸ್ದಿಂದ



Pages   (key to Page Status)   


ಶಿವಂಗೆ ತಪ್ಪಿದ ಕಾಲ ಭಸ್ಮವಾದುದನರಿಯಾ ? ಶಿವಂಗೆ ತಪ್ಪಿದ ಕಾಮನುರಿದುದನರಿಯಾ ? ಶಿವಂಗೆ ತಪ್ಪಿದ ಬ್ರಹ್ಮನ ಶಿರ ಹೋದುದನರಿಯಾ ? ಚೆನ್ನಮಲ್ಲಿಕಾರ್ಜುನನ ಪಾದಕ್ಕೆ ತಪ್ಪಿದಡೆ
ಭವಘೋರನರಕವೆಂದರಿಯಾ
ಮರುಳೆ ?