ಶಿವನಲ್ಲದೆ ಬೇರೆ ದೈವವಿಲ್ಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಿವನಲ್ಲದೆ ಬೇರೆ ದೈವವಿಲ್ಲ ನೋಡ ಎನಗೆ. ಶಿವಮಂತ್ರವಲ್ಲದೆ ಬೇರೆ ಮಂತ್ರವಿಲ್ಲ ನೋಡ ಎನಗೆ. ಇದು ಕಾರಣ
`ಓಂ ನಮಃಶಿವಾಯ ಓಂ ನಮಃ ಶಿವಾಯ ಓಂ ನಮಃಶಿವಾಯ' ಎಂಬ ಷಡಕ್ಷರಮಂತ್ರವನೆ ಜಪಿಸುತಿರ್ದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.