ಶಿವಶಿವಾ, ಹರಿವುತಿರ್ಪುದು ಎನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶಿವಶಿವಾ
ಎನ್ನ ಮನವು ನಿಮ್ಮ ನೆನೆಯಲೊಲ್ಲದೆ ಅನ್ಯಕ್ಕೆ ಹರಿವುತಿರ್ಪುದು ನೋಡಾ. ಗುರು ಚರ ಲಿಂಗದ ಸೇವೆಯೆಂದೊಡೆ ಹಿಂದುಳಿವುತಿರ್ಪುದು ನೋಡಾ. ಅನ್ಯರ ಒಡವೆಯಾದ ಹೊನ್ನು ಹೆಣ್ಣು ಮಣ್ಣೆಂದೊಡೆ ಮುಂದುವರಿದು ಓಡುತಿರ್ಪುದು ನೋಡಾ. ಈ ಮನದ ಉಪಟಳವು ಘನವಾಯಿತ್ತು. ಇನ್ನೇನು ಗತಿಯಯ್ಯ ಎನಗೆ ಅಖಂಡೇಶ್ವರಾ.