ಶೀಲಶೀಲವೆಂಬ ಅಣ್ಣಗಳು ನೀವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶೀಲಶೀಲವೆಂಬ ಅಣ್ಣಗಳು ನೀವು ಕೇಳಿರೊ: ಕಾಮ ಒಂದನೆಯ ಭವಿ
ಕ್ರೋಧ ಎರಡನೆಯ ಭವಿ
ಲೋಭ ಮೂರನೆಯ ಭವಿ
ಮೋಹ ನಾಲ್ಕನೆಯ ಭವಿ
ಮದ ಐದನೆಯ ಭವಿ
ಮತ್ಸರ ಆರನೆಯ ಭವಿ. ಇಂತೀ ಷಡ್ವಿಧಭವಿಯ ತಮ್ಮ ಎದೆಯೊಳಗೆ ಇಂಬಿಟ್ಟುಕೊಂಡು ಅಂಗದ ಮೇಲೆ ಅವರಿಗೆ ಲಿಂಗವುಂಟೊ ? ಇಲ್ಲವೊ ? ಎಂಬ ಜಗಭಂಡರು ನೀವು ಕೇಳಿರೊ: ಅಚ್ಚಪ್ರಸಾದಿ ನಿಚ್ಚಪ್ರಸಾದಿ ! ಜಲವನೆ ಹೊಕ್ಕು ಕನ್ನವನಿಕ್ಕಿ ಅಗ್ಗಣಿಯ ತಂದು ಮಜ್ಜನಕ್ಕೆ ನೀಡುವ ಹಗಲುಗಳ್ಳರ ಮೆಚ್ಚುವನೆ ಕೂಡಲಚೆನ್ನಸಂಗಮದೇವ ?