ಶೀಲ ಶೀಲವೆಂದೇನೋ ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶೀಲ ಶೀಲವೆಂದೇನೋ ? ಮಾಡಿದ ಮನೆ
ಹೂಡಿದ ಒಲೆ
ಅಟ್ಟುಂಬ ಮಡಕೆ
ಕಟ್ಟಿದ ಕೆರೆ
ಬಿತ್ತಿದ ಕೆಯಿ ಶೀಲವಲ್ಲದೆ ತನ್ನ ಮನಕ್ಕೆ ಶೀಲವಿಲ್ಲ. ಶೀಲವೆಂತೆಂದರೆ : ಲಿಂಗವು ಬಂದು ಮನವನಿಂಬುಗೊಂಬುದೇ ಶೀಲ. ಜಂಗಮ ಬಂದು ಧನವನಿಂಬುಗೊಂಬುದೇ ಶೀಲ. ಪ್ರಸಾದ ಬಂದು ತನುವನಿಂಬುಗೊಂಬುದೇ ಶೀಲ. ಇಂತಪ್ಪ ಶೀಲಕ್ಕೆ ನಮೋ ನಮೋ. ಉಳಿದ ದುಃಶೀಲರ ಕಂಡರೆ ಮೆಚ್ಚುವನೆ ನಮ್ಮ ಕೂಡಲಚೆನ್ನಸಂಗಯ್ಯ ?