ಶೂನ್ಯವ ನುಡಿದು ದುರ್ಗತಿಗಿಳಿದವರ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶೂನ್ಯವ ನುಡಿದು ದುರ್ಗತಿಗಿಳಿದವರ
ಅದ್ವೈತವ ನುಡಿದು ಅಹಂಕಾರಿಗಳಾದವರ
ಬ್ರಹ್ಮವ ನುಡಿದು ಭ್ರಮಿತರಾದವರ
ತ್ರಿಕಾಲ ಲಿಂಗಪೂಜೆಯ ಮಾಡದವರ ಬ್ರಹ್ಮದ ಅನವರತ ಮಾತ ಕೇಳಿ ಹಿಡಿದ ವ್ರತನೇಮಗಳ ಬಿಡುವವರ_ ಈ ದುರಾಚಾರಿಗಳ ಮೆಚ್ಚ
ಕೂಡಲಚೆನ್ನಸಂಗಾ ನಿಮ್ಮ ಶರಣ.