ಶೈವರು ಕಟ್ಟಿದ ಗುಡಿಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶೈವರು ಕಟ್ಟಿದ ಗುಡಿಯ ಹೊಗಲೇಕೆ? ಶೈವರು ನೆಟ್ಟ ಲಿಂಗವ ಮುಟ್ಟಿ ಪೂಜಿಸಲೇಕೆ? ಆದಕೆ ಉಪಾಸಿತವ ಮಾಡಲೇಕೆ? ನೆಟ್ಟಿದ್ದ ಕಲ್ಲಿಗೆ ನೀಡಿ ಕೆಡೆದರೆ ಕಟ್ಟಿದ್ದ ಕಲ್ಲಿನ ಕಷ್ಟವ ನೋಡಿರೆ! ಕಟ್ಟಿದ ಕಲ್ಲು ಕಳೆದಿಟ್ಟು ಬಿಟ್ಟು ನೆಟ್ಟಿದ್ದ ಕಲ್ಲಿಗೆ ನಮಿಸಿರಾ ಭ್ರಷ್ಟರಿರಾ. ತನ್ನ ಗುರು ಕೊಟ್ಟ ಇಷ್ಟಲಿಂಗ ಕೊಡಲರಿಯದೆಂದು
ನೆಟ್ಟಿದ್ದ ಲಿಂಗ ಕೊಟ್ಟಿತ್ತೆಂಬ ಕೊಟ್ಟಿಗಳ ಕೆಡೆನೋಡಿ ಹೊಟ್ಟೆ ಹುಣ್ಣಾಗುವಂತೆ ನಗುತಿರ್ದೆನಯ್ಯ. ಅದೇನು ಕಾರಣವೆಂದಡೆ: ಕಟ್ಟಿದ್ದುದೂ ಕಲ್ಲು
ನೆಟ್ಟಿದ್ದುದೂ ಕಲ್ಲು. ಅದೇನು ಕಾರಣವೆಂದಡೆ; ಏಕಲಿಂಗನಿಷಾ*ಚಾರವಿಲ್ಲದ ಕಾರಣ. ಪ್ರಾಣಲಿಂಗಿಗೆ ಈ ಪಾಷಾಣದ ಹಂಗುಂಟೆ? ಆತ್ಮನೊಳಗೆ ಹುಟ್ಟಿದ ಅನುಭಾವಲಿಂಗವ ಶ್ರೀಗುರು ತಂದು ಕರಸ್ಥಲದಲ್ಲಿ ಇಷ್ಟಲಿಂಗವ ಮಾಡಿರಿಸಿದನಾಗಿ ಇಷ್ಟ ಪ್ರಾಣ ಒಂದೇಯೆಂದು ಅರಿದು ಆರಾಧಿಸಿ ಸುಖಿಯಾಗಿದ್ದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.