ಶೈವಸಿದ್ಧಾಂತಿಗಳಪ್ಪ ಕರ್ಮಕಾಂಡಿಗಳು ಸ್ಥಾವರಲಿಂಗದೆಡೆಯಲ್ಲಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶೈವಸಿದ್ಧಾಂತಿಗಳಪ್ಪ ಕರ್ಮಕಾಂಡಿಗಳು ಸ್ಥಾವರಲಿಂಗದೆಡೆಯಲ್ಲಿ
ಹವನ ಹೋಮಾದಿ ಪವಿತ್ರಕಾರ್ಯವ ಕೈಕೊಂಡೆಡೆಯಲ್ಲಿ
ಉಚ್ಛಿಷ್ಟಾದಿ ಪಂಚಸೂತಕಗಳಂಟಿದಡೆ ಅವರು ಆ ಸೂತಕವ ಮಾನಿಸದೆ ಪರಿಶುದ್ಧಭಾವದಿಂದಿರ್ಪರು. ದೇವದೇವನಪ್ಪ ಮಹಾದೇವನನು ಲಿಂಗರೂಪದಿಂದ ಅಂಗದಲ್ಲಿ ಧರಿಸಿ ಪರಿಶುದ್ಧರಾದೆವೆಂದು ತಿಳಿಯದೆ ಸೂತಕವನಾಚರಿಸುವ ವ್ರತಗೇಡಿಗಳ ಎನಗೆ ತೋರದಿರಯ್ಯಾ_ ಕೂಡಲಚೆನ್ನಸಂಗಮದೇವಾ.