ಶ್ರೀಗುರುಕರುಣಿಸಿ ಹಸ್ತಮಸ್ತಕಸಂಯೋಗದಿಂದ ಪ್ರಾಣಲಿಂಗವನು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶ್ರೀಗುರುಕರುಣಿಸಿ ಹಸ್ತಮಸ್ತಕಸಂಯೋಗದಿಂದ ಪ್ರಾಣಲಿಂಗವನು ಕರತಳಾಮಳಕವಾಗಿ ಕರಸ್ಥಲಕ್ಕೆ ತಂದುಕೊಟ್ಟನಾಗಿ ಒಳಗೆನ್ನದೆ ಹೊರಗೆನ್ನದೆ
ಆ ಲಿಂಗದಲ್ಲಿ ನಚ್ಚಿ ಮಚ್ಚಿ ಹರುಷದೊಳೋಲಾಡಿದೆ ಅದೆಂತೆಂದಡೆ
ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ ನಾದಬಿಂದುಕಲಾತೀತಂ ಗುರುಣಾ ಲಿಂಗಮುದ್ಭವಂ ಎಂದುದಾಗಿ ಆ ಲಿಂಗವ ಪಡೆದು ಆನಂದಿಸುವೆ
ಕೂಡಲಸಂಗಮದೇವಾ.