ಶ್ರೀಗುರುವಿನ ಹೃದಯಗರ್ಭದಲ್ಲಿ ಕರಗರ್ಭದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶ್ರೀಗುರುವಿನ ಕರಗರ್ಭದಲ್ಲಿ ಉದಯವಾದ ಶರಣಸತಿ ನಾನು. ಶ್ರೀಗುರುವಿನ ಹೃದಯಗರ್ಭದಲ್ಲಿ ಉದಯವಾದ ಲಿಂಗಪತಿಗೆ ಎನ್ನ ಮದುವೆಯ ಮಾಡುವ ಕಾಲದಲ್ಲಿ ಸಹಸ್ರದಳಕಮಲವೆಂಬ ಸಾವಿರಕಂಬದ ಮಂಟಪವ ರಚಿಸಿ
ಆ ಮಂಟಪದ ಮಧ್ಯದಲ್ಲಿ ಪಂಚಪಾತ್ರವೆಂಬ ಪಂಚಮುದ್ರೆಯ ರಂಗವಲ್ಲಿಯ ತುಂಬಿ
ಆ ಪಂಚಮುದ್ರೆಯಲ್ಲಿ ಪಂಚಪ್ರಣವೆಂಬ ಪಂಚಕಲಶವ ಹೂಡಿ
ಆ ಪಂಚಕಲಶಂಗಳಿಗೆ ಸ್ವಾನುಭಾವಜ್ಞಾನವೆಂಬ ಸುರಗಿಯ ಸುತ್ತಿ
ಆ ಮಧ್ಯದಲ್ಲಿ ಎನಗೆ ಶೃಂಗಾರವ ಮಾಡಿದರೆಂತೆನಲು
ಸರ್ವಾಚಾರಸಂಪತ್ತೆಂಬ ಸೀರೆಯನುಡಿಸಿ
ಸುಜ್ಞಾನವೆಂಬ ಕುಪ್ಪಸವ ತೊಡಿಸಿ
ಸದ್ಭಕ್ತಿಯೆಂಬ ಬಳೆಯನಿಡಿಸಿ
ಏಕಭಾವದ ನಿಷೆ*ಯೆಂಬ ತಾಳಿಯ ಕಟ್ಟಿ
ನಿಜಮುಕ್ತಿಯೆಂಬ ಮೂಗುತಿಯನಿಟ್ಟು ಶಿವಮಂತ್ರವೆಂಬ ಕರ್ಣಾಭರಣವ ಧರಿಸಿ
ಸತ್ಕ್ರಿಯೆಯೆಂಬ ಪಾದಾಭರಣವ ಧರಿಸಿ
ಪರಮೇಶ್ವರನ ಚಿತ್‍ಪ್ರಕಾಶವೆಂಬ ಚಿದ್‍ವಿಭೂತಿಯನೆ ತಂದು
ಎನ್ನ ಲಲಾಟದಲ್ಲಿ ಪಟ್ಟವ ಕಟ್ಟಿ
ಸತಿಸಂಗವಗಲಬೇಡವೆಂದು ಎನ್ನ ಪತಿಯ ಸೆರಗ ತಂದು ಎನ್ನ ಸೆರಗಿಗೆ ಕೂಡಿಸಿ
ಷಟ್‍ಸ್ಥಲಬ್ರಹ್ಮಗಂಟನಿಕ್ಕಿ
ಪತಿಭಕ್ತಿಯಗಲದಿರೆಂದು ಎನ್ನ ಮುಂಗೈಯಲ್ಲಿ ಸಕಲಗಣಂಗಳ ಸಾಕ್ಷಿಯಾಗಿ ಬಿರುದಿನ ವೀರಕಂಕಣವ ಕಟ್ಟಿ
ಜಂಗಮದ ಪಾದತೀರ್ಥ ಪ್ರಸಾದವೆಂಬ ಭೂಮವನುಣಿಸಿ
ಮದುವೆಯ ಮಾಡಿದರಂದು. ಇಂದು ಎನಗೆ ಯೌವನವಾಯಿತ್ತು. ಏಳುನೆಲೆಯ ಮೇಲುಪ್ಪರಿಗೆಯ ಮೇಲೆ ಲೀಲೆಯಿಂದ ಕೂಡಿ ಸುಖಿಸಯ್ಯಾ ಎನ್ನ ಅಖಂಡೇಶ್ವರಾ.