ವಿಷಯಕ್ಕೆ ಹೋಗು

ಶ್ರೀಗುರು ಉಪದೇಶವ ಮಾಡುವಲ್ಲಿ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಶ್ರೀಗುರು ಉಪದೇಶವ ಮಾಡುವಲ್ಲಿ ಭಕ್ತಗಣಸಾಕ್ಷಿಯಾಗಿ ಹಸ್ತಮಸ್ತಕಸಂಯೋಗವ ಮಾಡಿ
ಆ ಮಸ್ತಕಾಗ್ರದೊಳಿಪ್ಪ ನಿತ್ಯನಿರಂಜನ ಶಿವಕಳೆಯ ಭಾವದೊಳು ಭರಿತವೆನಿಸಿ ಮನದೊಳು ಮಂತ್ರಯುಕ್ತದಿಂ ಮೂರ್ತಿಗೊಳಿಸಿ ಚರಪಾದತೀರ್ಥಪ್ರಸಾದದೊಳು ಬೆರಸಿ_ ಇಂತೀ ಗುರುಚರಪರರಾಜ್ಞೆಯಲಿ ಪ್ರಾಣಲಿಂಗವ ಕರಸ್ಥಲಕ್ಕೆ ಬಿಜಯಂಗೈಸಿ ಕೊಟ್ಟ ಬಳಿಕ
ಗುರು ಕೊಟ್ಟ ಇಷ್ಟಲಿಂಗದಲ್ಲಿ ನಿಷೆ*ಗಟ್ಟಿಗೊಂಡು ಮನಮುಟ್ಟಿ ಪೂಜಿಸಿ ಪ್ರಸಾದವಂ ಪಡೆದು ನಿಜಮುಕ್ತಿಯನೈದಲರಿಯದೆ ಈ ಗುರು ಕೊಟ್ಟ ಇಷ್ಟಲಿಂಗವ ಬಿಟ್ಟು ಗುರುಕಾರುಣ್ಯ ಚರಪ್ರಸಾದ ಹೊರಗಾದ
ಧರೆಯ ಮೇಲಣ ಪ್ರತಿಷೆ*ಯನುಳ್ಳ ಭವಿಶೈವದೈವಕ್ಕೆರಗುವ ದುರಾಚಾರಿಗಳಿಗೆ ಅಘೋರನರಕ ತಪ್ಪದು ಕಾಣಾ ಕೂಡಲಚೆನ್ನಸಂಗಯ್ಯ.