ಶ್ರೀಗುರು ಲಿಂಗ ಜಂಗಮದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶ್ರೀಗುರು ಲಿಂಗ ಜಂಗಮದ ಕರುಣ ಕಟಾಕ್ಷೆಯಿಂದ ದಶವಿಧ ಲಿಂಗಂಗಳ ಪಡೆದು ಆ ಲಿಂಗನಿಷಾ*ಪರತ್ವದಿಂದ
ನಿನ್ನ ಪ್ರಾಣನ ಮಧ್ಯದಲ್ಲಿ ನೆಲಸಿರ್ಪ ದಶವಿಧ ಚಿದ್ವಾಯುಗಳು
ದಶವಿಧ ಸುನಾದಗಳು
ದಶವಿಧಸತ್ಕರಣಂಗಳನ್ನು ಮಹಾಜ್ಯೋತಿರ್ಮಯಲಿಂಗದತ್ತ ಮುಖಮಾಡಿ ನೋಡಲು ಮಹಾಶರಣಗಣಮಾರ್ಗದ ಬಟ್ಟಬಯಲ ನಿಜಾಚರಣೆ ದೊರೆವುದು ನೋಡ ! ಗುಹೇಶ್ವರ ಲಿಂಗದಲ್ಲಿ ಚನ್ನಬಸವಣ್ಣ.