ಶ್ರೀವಿಭೂತಿಯ ಬಿಟ್ಟು ತಪಸ್ಸು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಶ್ರೀವಿಭೂತಿಯ ಬಿಟ್ಟು ತಪಸ್ಸು ಮಾಡಿದಡೆ ಆ ತಪಃಸಿದ್ಧಿ ಬಯಲು
ಶ್ರೀವಿಭೂತಿಯ ಬಿಟ್ಟು ದೀಕ್ಷೆಯ ಕೊಂಡಡೆ ಆ ದೀಕ್ಷೆ ಬಯಲು
ಶ್ರೀವಿಭೂತಿಯ ಬಿಟ್ಟು ಮಂತ್ರಗಳ ಸಾಧಿಸಿದಡೆ ಆ ಮಂತ್ರಸಿದ್ಧಿ ಬಯಲು
ಶ್ರೀವಿಭೂತಿಯ ಬಿಟ್ಟು ಯಜ್ಞಂಗಳ ಸಾಧಿಸಿದಡೆ ಆ ಯಜ್ಞಸಿದ್ಧಿ ಬಯಲು
ಶ್ರೀವಿಭೂತಿಯ ಬಿಟ್ಟು ದೇವತಾರ್ಚನೆಯ ಮಾಡಿದಡೆ ಆ ದೇವತಾರ್ಚನೆಬಯಲು ಶ್ರೀವಿಭೂತಿಯ ಬಿಟ್ಟು ವಿದ್ಯವ ಸಾಧಿಸಿದಡೆ ಆ ವಿದ್ಯಾಸಿದ್ಧಿ ಬಯಲು. ಹಲವು ಕಾಲ ಕೊಂದ ಸೂನೆಗಾರನ ಕೈಯ್ಯ ಕತ್ತಿಯಾದಡೇನು ಪರುಷ ಮುಟ್ಟಲು ಹೊನ್ನಾಗದೇ ಅಯ್ಯಾ ಲಲಾಟದಲ್ಲಿ ವಿಭೂತಿಯ ಧರಿಸಲ್ಕೆ
ಪಾಪಂಗಳು ಬೆಂದು ಹೋಗದಿಹವೇ ಕೂಡಲಸಂಗಮದೇವಾ