ವಿಷಯಕ್ಕೆ ಹೋಗು

ಶ್ರೋತ್ರದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು,

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಶ್ರೋತ್ರದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು
ತ್ವಕ್ಕಿನಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು
ನೇತ್ರದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು
ಜಿಹ್ವೆಯಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು
ನಾಸಿಕದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು. ಇಂತೀ ಪಂಚೇಂದ್ರಿಯಂಗಳಲ್ಲಿ ಬ್ರಹ್ಮಚಾರಿಯಾಗಿ
ಕೂಡಲಸಂಗಮದೇವರಲ್ಲಿ ಎನ್ನನಾಗುಮಾಡಲಿಕೆ ಬ್ರಹ್ಮಚಾರಿಯಾದರು ಪ್ರಭುದೇವರು.