ಶ್ವೇತ ಪೀತ ಕಪೋತ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಶ್ವೇತ ಪೀತ ಕಪೋತ ಹರಿತ ಕೃಷ್ಣ ಮಾಣಿಕವೆಂಬ ಆರು ವರ್ಣ. ಅದಕ್ಕೆ ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಶ್ರೀಗುರು_ಎಂಬ ಆದು ಅಧಿದೇವತೆ
ಈ ಭೇದವನೆಲ್ಲ ತಿಳಿದು ನೋಡಿ
ಉನ್ಮನಿಯ ಜ್ಯೋತಿಯ ಬ್ರಹ್ಮರಂಧ್ರದ ಸಹಸ್ರದಳ ಪದ್ಮದ ಅಮೃತಬಿಂದುವಿನೊಳಗಣ ಪ್ರಾಣವೆ ರೂಪಾಗಿ
ಪ್ರಾಣಲಿಂಗದಲ್ಲಿ ಒಡಗೂಡಬಲ್ಲ ಗುಹೇಶ್ವರಾ ನಿಮ್ಮ ಶರಣ.