ಸಂಗ್ರಾಮ ಒಡ್ಡಿದಲ್ಲಿ ಹಂದೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸಂಗ್ರಾಮ ಒಡ್ಡಿದಲ್ಲಿ ಹಂದೆ ಗೆಲಬಲ್ಲನೆ ಹೇಳಾ ? ನಿಂದ ನಿಲವಿನ ಘನಮಡುವ
ಕಂದ ಈಸಾಡಬಲ್ಲನೆ ಹೇಳಾ ? ಗುಹೇಶ್ವರನೆಂಬ ನಿರಾಳದ ಘನವ
ಪಂಚೇಂದ್ರಿಯಕ ಬಲ್ಲನೆ ಹೇಳಾ ?