ವಿಷಯಕ್ಕೆ ಹೋಗು

ಸಂಸಾರಸಂಗದಲ್ಲಿರ್ದೆ ನೋಡಾ ನಾನು.

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಸಂಸಾರಸಂಗದಲ್ಲಿರ್ದೆ ನೋಡಾ ನಾನು. ಸಂಸಾರ ನಿಸ್ಸಾರವೆಂದು ತೋರಿದನೆನಗೆ ಶ್ರೀಗುರು. ಅಂಗವಿಕಾರದ ಸಂಗವ ನಿಲಿಸಿ
ಲಿಂಗವನಂಗದ ಮೇಲೆ ಸ್ಥಾಪ್ಯವ ಮಾಡಿದನೆನ್ನ ಗುರು
ಹಿಂದಣ ಜನ್ಮವ ತೊಡೆದು
ಮುಂದಣ ಪಥವ ತೋರಿದನೆನ್ನ ತಂದೆ. ಚೆನ್ನಮಲ್ಲಿಕಾರ್ಜುನನ ನಿಜವ ತೋರಿದನೆನ್ನ ಗುರು.