ಸಂಸಾರಸಾಗರದ ತೆರೆ ಕೊಬ್ಬಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸಂಸಾರಸಾಗರದ ತೆರೆ ಕೊಬ್ಬಿ ಮುಖದ ಮೇಲೆ ಅಲೆವುತ್ತಲಿದೆ
ಸಂಸಾರಸಾಗರ ಉರದುದ್ದವೆ ಹೇಳಾ ! ಸಂಸಾರಸಾಗರ ಕೊರಳುದ್ದವೆ ಹೇಳಾ ! ಸಂಸಾರಸಾಗರ ಶಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ ! ಅಯ್ಯಾ ಅಯ್ಯಾ ಎನ್ನ ಹುಯ್ಯಲ ಕೇಳಯ್ಯಾ ಕೂಡಲಸಂಗಮದೇವಾ ನಾನೇವೆನೇವೆನಯ್ಯಾ ! 8