ಸಕಳಸ್ಥಲದ ಲಿಂಗ ಮನಸ್ಥಲದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಕಳಸ್ಥಲದ ಲಿಂಗ ಮನಸ್ಥಲದಲ್ಲಿ ವೇದ್ಯವಾಗಿ
ಮನಸ್ಥಲದ ಲಿಂಗ ಮಹಾಸ್ಥಲದಲ್ಲಿ ವೇದ್ಯವಾಗಿ
ಆ ಮಹಾಸ್ಥಲವೇ ಎನ್ನ ಸರ್ವಾಂಗದಲ್ಲಿ ವೇದ್ಯವಾದ ಬಳಿಕ ಇನ್ನು ಭಿನ್ನಭಾವಕ್ಕೆ ತೆರಹೆಂಬುದುಂಟೆ ? ಗುಹೇಶ್ವರನೆಂಬ ಪ್ರಾಣಲಿಂಗವ ಬೆರಸಿ ಸಮರಸವಾದ ಬಳಿಕ ಎರಡೆಂಬುದಿಲ್ಲ ನೋಡಾ ಚೆನ್ನಬಸವಣ್ಣ.