ಸಚ್ಚಿದಾನಂದ ಪರಶಿವನ ಸದ್ಯೋಜಾತಮುಖದಿಂದ ಪೃಥ್ವಿತತ್ತ್ವ ಪುಟ್ಟಿತ್ತು. ಆ ತತ್ವದಿಂದೆ ನಿವೃತ್ತಿ ಎಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಕಪಿಲವರ್ಣದ ನಂದಿನಿಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಮಹದೈಶ್ವರ್ಯವನ್ನುಂಟುಮಾಡುವಂಥ ಭೂತಿ ಎಂಬ ವಿಭೂತಿ ಪುಟ್ಟಿತ್ತು. ಮತ್ತಂ
ಸಚ್ಚಿದಾನಂದ ಪರಶಿವನ ವಾಮದೇವಮುಖದಿಂದೆ ಅಪ್ಪುತತ್ವ ಪುಟ್ಟಿತ್ತು. ಆ ತತ್ವದಿಂದೆ ಪ್ರತಿಷೆ*ಯೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಕೃಷ್ಣವರ್ಣದ ಭದ್ರೆಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ದಿವ್ಯಪ್ರಕಾಶದಿಂ ಬೆಳಗುವಂಥ ಭಸಿತವೆಂಬ ವಿಭೂತಿ ಪುಟ್ಟಿತ್ತು. ಮತ್ತಂ
ಸಚ್ಚಿದಾನಂದ ಪರಶಿವನ ಅಘೋರಮುಖದಿಂದೆ ಅಗ್ನಿತತ್ವ ಪುಟ್ಟಿತ್ತು. ಆ ತತ್ವದಿಂದೆ ವಿದ್ಯೆಯೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ರಕ್ತವರ್ಣದ ಸುರಭಿಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಸಮಸ್ತ ಪಾತಕಂಗಳ ಭಕ್ಷಿಸುವಂಥ ಭಸ್ಮವೆಂಬ ವಿಭೂತಿ ಪುಟ್ಟಿತ್ತು. ಮತ್ತಂ
ಸಚ್ಚಿದಾನಂದ ಪರಶಿವನ ತತ್ಪುರುಷಮುಖದಿಂದೆ ವಾಯುತತ್ವ ಪುಟ್ಟಿತ್ತು. ಆ ತತ್ವದಿಂದೆ ಶಾಂತಿಯೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಶ್ವೇತವರ್ಣದ ಸುಶೀಲೆಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಸಕಲ ವ್ಯಾಧಿಗಳ ಕೆಡಿಸುವಂಥ ಕ್ಷಾರವೆಂಬ ವಿಭೂತಿ ಪುಟ್ಟಿತ್ತು. ಮತ್ತಂ
ಸಚ್ಚಿದಾನಂದ ಪರಶಿವನ ಈಶಾನ್ಯಮುಖದಿಂದೆ ಆಕಾಶತತ್ವ ಪುಟ್ಟಿತ್ತು. ಆ ತತ್ವದಿಂದೆ ಶಾಂತ್ಯತೀತವೆಂಬ ಕಲೆ ಪುಟ್ಟಿತ್ತು. ಆ ಕಲೆಯಿಂದೆ ಚಿತ್ರವರ್ಣದ ಸುಮನೆಯೆಂಬ ಗೋವು ಪುಟ್ಟಿತ್ತು. ಆ ಗೋವಿನ ಗೋಮಯದಿಂದೆ ಭೂತ ಪ್ರೇತ ಪಿಶಾಚಿ ಬ್ರಹ್ಮರಾಕ್ಷಸ ಚೋರ ಸರ್ವವ್ಯಾಘ್ರಾದಿಗಳ ಭಯವ ಕೆಡಿಸುವ ರಕ್ಷೆಯೆಂಬ ವಿಭೂತಿ ಪುಟ್ಟಿತ್ತು. ಅದೆಂತೆಂದೊಡೆ :ಜಾಬಾಲೋಪನಿಷದಿ : `` ಸದ್ಯೋಜಾತಾತ್ ಪೃಥಿವೀ ತಸ್ಯಾಃ ನಿವೃತ್ತಿಃ ತಸ್ಯಾಃ ಗೋಮಯೇನ ವಿಭೂತಿರ್ಜಾತಾ