ಸಜ್ಜನೆಯಾಗಿ ಮಜ್ಜನಕ್ಕೆರೆವೆ, ಶಾಂತಳಾಗಿ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಜ್ಜನೆಯಾಗಿ ಮಜ್ಜನಕ್ಕೆರೆವೆ
ಶಾಂತಳಾಗಿ ಪೂಜೆಮಾಡುವೆ
ಸಮರತಿಯಿಂದ ನಿಮ್ಮ ಹಾಡುವೆ
ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮನಗಲದ ಪೂಜೆ ಅನುವಾಯಿತ್ತೆನಗೆ.