ವಿಷಯಕ್ಕೆ ಹೋಗು

ಸಣ್ಣನ ನೂಲುವ ಚಿಣ್ಣಂಗೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಸಣ್ಣನ ನೂಲುವ ಚಿಣ್ಣಂಗೆ ಬಣ್ಣ ಮುನ್ನಿಲ್ಲ ನೋಡಯ್ಯ. ಚಿಣ್ಣ ತಾನಾದರೇನಯ್ಯ? ಬಣ್ಣವುಳ್ಳವರ ಕಣ್ಣಿಗೆ ಕಾಣಿಸನು ನೋಡಯ್ಯ. ಬಣ್ಣವಳಿದು ಕಣ್ಣ ಕತ್ತಲೆ ಹರಿದಲ್ಲದೆ ಚಿಣ್ಣನ ಕಾಣಬಾರದಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ