ವಿಷಯಕ್ಕೆ ಹೋಗು

ಸತಿಯ ಸಂಗವತಿಸುಖವೆಂದರಿದಡೇನು ?

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಸತಿಯ ಸಂಗವತಿಸುಖವೆಂದರಿದಡೇನು ? ಗಣಸಾಕ್ಷಿಯಾಗಿ ವಿವಾಹವಾಗದನ್ನಕ್ಕರ ? ಕಣ್ಣು ಕಾಂಬುದೆಂದಡೆ
ಕತ್ತಲೆಯಲ್ಲಿ ಕಾಂಬುದೆ ದೀಪವಿಲ್ಲದನ್ನಕ್ಕರ ? ಸೂರ್ಯನ ಪ್ರಕಾಶದಿಂದ ಕಂಡು ತಾನೆ
ಕಂಡೆನೆಂಬ ಜಗದ ನಾಣ್ಣುಡಿಯಂತಾಯಿತ್ತು. ಅಂಗವ ಬಿಟ್ಟು ಆತ್ಮನುಂಟೆ ? ಶಕ್ತಿಯ ಬಿಟ್ಟು ಶಿವನುಂಟೆ ? ಇದು ಕಾರಣ_ಸ್ಥೂಲ ಸೂಕ್ಷ್ಮಕಾರಣ ತನುತ್ರಯವಿರಲು
ಇಷ್ಟ ಪ್ರಾಣ ಭಾವವೆಂಬ ತ್ರಿವಿಧಲಿಂಗಸಂಬಂಧ ಬೇಡವೆಂದಡೆ ಅಸಂಖ್ಯಾತ ಪ್ರಮಥಗಣಂಗಳೊಪ್ಪುವರೆ ? ಕೂಡಲಚೆನ್ನಸಂಗಯ್ಯನಲ್ಲಿ ಇಷ್ಟಲಿಂಗಸಂಬಂಧವಿಲ್ಲದವರ ಮುಖವ ನೋಡಲಾಗದು ಪ್ರಭುವೆ.