ಸತಿ ಭಕ್ತೆಯಾದಡೆ ಹೊಲೆಗಂಜಲಾಗದು ಪತಿ ಭಕ್ತನಾದೆಡೆ ಕುಲಕಂಜಲಾಗದು. ಸತಿ_ಪತಿಯೆಂಬ ಅಂಗಸುಖ ಹಿಂಗಿ ಲಿಂಗವೇ ಪತಿಯಾದ ಬಳಿಕ ಸತಿಗೆ ಪತಿಯುಂಟೆ? ಪತಿಗೆ ಸತಿಯುಂಟೆ? ಹಾಲುಂಡು ಮೇಲುಂಬರೆ ಗುಹೇಶ್ವರಾ?