ಸತ್ತಾತನೊಬ್ಬ ಹೊತ್ತಾತನೊಬ್ಬ, ಈ

ವಿಕಿಸೋರ್ಸ್ದಿಂದ



Pages   (key to Page Status)   


ಸತ್ತಾತನೊಬ್ಬ ಹೊತ್ತಾತನೊಬ್ಬ
_ ಈ ಇಬ್ಬರನೂ ಒಯ್ದು ಸುಟ್ಟಾತನೊಬ್ಬ. ಮದವಣಿಗನಾರೊ? ಮದವಳಿಗೆ ಯಾರೊ? ಮದುವೆಯ ನಡುವೆ ಮರಣವಡ್ಡಬಿದ್ದಿತ್ತು. ಹಸೆಯಳಿಯದ ಮುನ್ನ ಮದವಣಿಗನಳಿದ. ಗುಹೇಶ್ವರಾ_ನಿಮ್ಮ ಶರಣನೆಂದೂ ಅಳಿಯ.