ಸತ್ತುವೆಂಬ ಗುರುವಿನಲ್ಲಿ ಎನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸತ್ತುವೆಂಬ ಗುರುವಿನಲ್ಲಿ ಎನ್ನ ಸರ್ವಾಂಗವಾಗಿ ಚಿತ್ರದ ಪ್ರತಿಮೆಯ ಅವಯವಂಗಳ ಶೃಂಗಾರದಂತೆ ಆಕಾರವೆಂಬಂತಿರ್ದೆನಯ್ಯ. ಚಿತ್ತೆಂಬ ಲಿಂಗದೊಳಗೆ ಮನವಡಗಿ ನವನಾಳದ ಸುಳುಹು ಕೆಟ್ಟು ಸುಷುಪ್ತಿಯನೆಯ್ದಿದ್ದೆನಯ್ಯ. ಇದು ಕಾರಣ: ಎನ್ನ ಜಾಗ್ರ ಸ್ವಪ್ನ ಸುಷುಪ್ತಿಯೆಂತಿಪ್ಪುದ ನೀ ಬಲ್ಲೆಯಲ್ಲದೆ ಮತ್ತಾರು ಬಲ್ಲರು ಹೇಳಾ. ಆನಂದವೆಂಬ ಜಂಗಮದಲ್ಲಿ ಅರುಹು ಏಕತ್ವವಾಗಿ ಅತ್ಮೋಹಂಯೆಂಬುದನರಿಯೆನು ನೋಡಾ
ನಾನು ಪರಮಾತ್ಮನಾದ ಕಾರಣ. ನಿತ್ಯವೆಂಬ ಪ್ರಸಾದದಲ್ಲಿ ಪ್ರಾಣವಡಗಿ ನಿತ್ಯಾನಿತ್ಯವನರಿಯದೆ ಸಚ್ಚಿದಾನಂದ ನಿತ್ಯ ಪರಿಪೂರ್ಣವಾಗಿ ಅನಾದಿ ಭಕ್ತನಾದೆನಯ್ಯಾ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.