ಸತ್ಯನಲ್ಲ, ಅಸತ್ಯನಲ್ಲ. ಕರ್ಮಿಯಲ್ಲ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸತ್ಯನಲ್ಲ
ಅಸತ್ಯನಲ್ಲ. ಕರ್ಮಿಯಲ್ಲ
ಧರ್ಮಿಯಲ್ಲ
ನಿಃಕರ್ಮಿಯಯ್ಯ ಭಕ್ತನು. ಆಚಾರನಲ್ಲ ಅನಾಚಾರನಲ್ಲ; ಪುಣ್ಯ ಪಾಪ ವಿರಹಿತನಾಗಿ ನಿಷ್ಪಾಪಿಯಯ್ಯ ಭಕ್ತನು. ವ್ರತ ನೇಮ ಮಂತ್ರ ತಂತ್ರ ಭವಿ ಭಕ್ತನೆಂಬುವುದಿಲ್ಲ ನೋಡಾ
ಲಿಂಗೈಕ್ಯಂಗೆ. ಸವಿಕಲ್ಪನಲ್ಲ. ನಿರ್ವಿಕಲ್ಪನಲ್ಲ. ಸೀಮನಲ್ಲ. ನಿಸ್ಸೀಮನಲ್ಲ. ಪರಮ ನಿರಂಜನನು ತಾನೆ ನೋಡಾ ಭಕ್ತನು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.