ಸದ್ಗುರುಮಾರ್ಗಾಚಾರದ ನೆಲೆಕಲೆಯನರಿಯದೆ, ಸದಾಚಾರಸದ್ಭಕ್ತನಲ್ಲಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸದ್ಗುರುಮಾರ್ಗಾಚಾರದ ನೆಲೆಕಲೆಯನರಿಯದೆ
ಸದಾಚಾರಸದ್ಭಕ್ತನಲ್ಲಿ ಆಡಂಬರಲಾಂಛನದ ವೇಷವ ಧರಿಸಿ
ಗ್ರಾಸವ ಹೊರೆದು
ಗುಹ್ಯಲಂಪಟ ಹೆಚ್ಚಿ
ಆ ಭಕ್ತನ ಕ್ರಿಯಾಶಕ್ತಿಗೆ ಭ್ರಮಿಸುವನೊಬ್ಬ ಚರಪ್ರಾಣಿಯ ಜಡಜಂತುವೆಂಬೆನಯ್ಯಾ. ಅಂಥ ಕಾಮವಿಕಾರಭ್ರಾಂತನ ಕಾಮವ ಪರಿಹರಿಸಿ
ಲಿಂಗಾಂಗನಿಷಾ*ಪರತ್ವವ ಹೇಳದೆ
ತಾ ಭೋಗಿಸುವ ಸ್ತ್ರೀಯಳ ಕೊಡುವನೊಬ್ಬ ಸ್ಥಾವರಪ್ರಾಣಿಯ ಕ್ರಿಮಿಕೀಟಕಪ್ರಾಣಿಯೆಂಬೆನಯ್ಯಾ. ಇಂತು ತನುಮನಧನಂಗಳ ಕೊಟ್ಟುಕೊಂಬ ವಿಚಾರವನರಿಯದೆ ಬಿಂದುವೆ ನಿಜಶೇಷವೆಂದು ತಿಳಿಯದ ಮೂಳನಿಗೆಲ್ಲಿಯದೊ ತ್ರಿವಿಧಪ್ರಸಾದ ಸ್ಥಲದಿಂದ ಸ್ಥಲವನರ್ಪಿಸುವುದು ಒಡಲ ಗುಣ
ನಿಃಸ್ಥಲದಿಂದ ನಿಃಸ್ಥಲವನರ್ಪಿಸುವುದು ಪ್ರಾಣನ ಗುಣ
ನೋಡಿ ಆರೈವುದೆ ಅರ್ಪಿತ ಗುಣ
ಇಂಥ ಮಹಾಂತರ ತೋರಿ ಬದುಕಿಸಯ್ಯಾ
ಕೂಡಲಸಂಗಮದೇವಾ.